ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಆದರೂ ಇನ್ನೂ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತಿದೆ. ಮೇ 31ರ ಬೆಳಿಗ್ಗೆವರೆಗೂ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.
ನಾಯಕತ್ವ ಬದಲಾವಣೆ ಬಗ್ಗೆ ಮುರುಗೇಶ್ ನಿರಾಣಿ ಹೇಳಿಕೆ; ಅವಧಿ ಪೂರ್ಣ ಯಡಿಯೂರಪ್ಪ ಸಿಎಂ
ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗಿದೆ. ಇಂದು 1,600 ಜನರಲ್ಲಿ ಮಾತ್ರ ಹೊಸದಾಗಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ ಸಂಪೂರ್ಣ ಇಳಿಮುಖವಾಗಿದ್ದರೆ ಮೇ 31ರ ಬಳಿಕ ಅನ್ ಲಾಕ್ ಮಾಡಲಾಗುತ್ತದೆ. ಹಂತ ಹಂತವಾಗಿ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡುತ್ತೇವೆ ಎಂದು ಹೇಳಿದರು.