alex Certify BIG NEWS: ರಕ್ಷಣಾ ವಲಯದ ಕಂಪನಿಗಳು ಷೇರು ಮಾರುಕಟ್ಟೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಕ್ಷಣಾ ವಲಯದ ಕಂಪನಿಗಳು ಷೇರು ಮಾರುಕಟ್ಟೆಗೆ

ಭಾರತದಲ್ಲಿ ರಕ್ಷಣಾ ವಸ್ತುಗಳ ಉತ್ಪಾದನೆಗೆ ಕೇಂದ್ರ ಕ್ರಮಕೈಗೊಳ್ಳುತ್ತಿದೆ. ಮೇಕ್ ಇನ್ ಇಂಡಿಯಾ ಯೋಜನೆಯಡಿ ಈ ಕ್ರಮಕೈಗೊಳ್ಳುತ್ತಿದೆ. ರಕ್ಷಣಾ ವಲಯದ ಉತ್ಪನ್ನಗಳ ಆಮದು ಕಡಿಮೆ ಮಾಡಲು ಕ್ರಮಕೈಗೊಳ್ಳಲಾಗ್ತಿದೆ. ಭಾರತದಲ್ಲಿಯೇ ರಕ್ಷಣಾ ವಸ್ತುಗಳ ಖರೀದಿಗೆ ಬಜೆಟ್ ನಲ್ಲಿ ಅವಕಾಶ ನೀಡಲು ನಿರ್ಧರಿಸಲಾಗಿದೆ. ಶಸ್ತ್ರಾಸ್ತ್ರ ಕೈಗಾರಿಕಾ ಮಂಡಳಿಯ ಸ್ವಾಯತ್ತತೆ, ಹೊಣೆಗಾರಿಕೆ ಹೆಚ್ಚಳಕ್ಕೆ ಮಹತ್ವ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರಕ್ಷಣಾ ಕಂಪನಿಗಳು ಷೇರು ಮಾರುಕಟ್ಟೆ ಪ್ರವೇಶಿಸಲು ಕ್ರಮಕೈಗೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಕ್ಷಣಾ ಉತ್ಪಾದನೆ ಮಾಡುವ ಕಂಪನಿಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡಲಿದೆ ಎಂದು ನಿರ್ಮಲಾ ಸೀತಾರಾಮನ್ ಕಾರ್ಪೋರೇಟೈಸೇಷನ್ ಎಂದ್ರೆ ಖಾಸಗೀಕರಣವಲ್ಲ ಎಂದಿದ್ದಾರೆ.

ರಕ್ಷಣಾ ವಲಯದ ಎಫ್ ಡಿಐ ಶೇಕಡಾ 49ರಿಂದ ಶೇಕಡಾ 74ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...