ಮುಂಬೈ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿದ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದಲ್ಲಿ ರಾಜ್ಯದ ಜನತೆಗೆ ಉಚಿತ ಲಸಿಕೆ ನೀಡಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮೇ 1ರಿಂದ ರಾಜ್ಯದಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಸಚಿವ ನವಾಬ್ ಮಲಿಕ್ ಘೋಷಿಸಿದ್ದಾರೆ.
ಕೊರೋನಾ ತಡೆಗೆ ಮತ್ತೊಂದು ಮಹತ್ವದ ಕ್ರಮ: ಚಿಕಿತ್ಸೆಗೆ ಟೆಲಿ ಕಾಲಿಂಗ್ ವ್ಯವಸ್ಥೆ
ಇನ್ನು ಕರ್ನಾಟಕದಲ್ಲಿಯೂ ಉಚಿತ ಲಸಿಕೆ ನೀಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.