ನವದೆಹಲಿ: ಲಾಕ್ ಡೌನ್ ನಡುವೆಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದರ ಜೊತೆಗೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ. ಸೋಂಕಿತರು ಆಕ್ಸಿಜನ್ ಇಲ್ಲದೇ ಸಾವನ್ನಪ್ಪುತ್ತಿದ್ದಾರೆ. ಪ್ರಸ್ತುತ ದೆಹಲಿಯಲ್ಲಿ 700 ಟನ್ ಆಕ್ಸಿಜನ್ ಅಗತ್ಯವಿದೆ. ಕೇಂದ್ರ ಸರ್ಕಾರ 490 ಟನ್ ಆಕ್ಸಿಜನ್ ಹಂಚಿಕೆ ಮಾಡಿದೆ. ಆದರೆ ಸಿಗುತ್ತಿಲ್ಲ. ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡುತ್ತಿರುವುದಾಗಿ ತಿಳಿಸಿದರು.
ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ವೀಕೆಂಡ್ ಕರ್ಫ್ಯೂ ಮುಂದುವರೆಸುವ ಬಗ್ಗೆ ಸಿಎಂ ನಿರ್ಧಾರ: ಡಿ.ವಿ. ಸದಾನಂದಗೌಡ
ಈಗಾಗಲೇ ಜಾರಿಯಲ್ಲಿದ್ದ ಲಾಕ್ ಡೌನ್ ಅವಧಿ ನಾಳೆ ಬೆಳಿಗ್ಗೆ 6 ಗಂಟೆಗೆ ಮುಗಿಯಲಿತ್ತು. ಈಗ ಮತ್ತೆ ಲಾಕ್ ಡೌನ್ ವಿಸ್ತರಿಸಿರುವುದರಿಂದ ಮುಂದಿನ ಸೋಮವಾರದ ಬೆಳಿಗ್ಗೆ 6 ಗಂಟೆವರೆಗೆ ಲಾಕ್ ಡೌನ್ ಇರಲಿದೆ.