ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಮಹಾಮಾರಿ ಎಲ್ಲರ ಬದುಕನ್ನು ಕಂಗೆಡಿಸಿದೆ. ಸೋಂಕಿಗೆ ಲಸಿಕೆ ಇನ್ನೂ ಲಭ್ಯವಾಗದ ಕಾರಣ ಇದರ ನಿಯಂತ್ರಣಕ್ಕಾಗಿ ಕಡ್ಡಾಯವಾಗಿ ಮಾಸ್ಕ್ ಧಾರಣೆ ಮಾಡುವುದು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯವಾಗಿದೆ.
ಕೊರೊನಾ ಈಗ ಹಬ್ಬ ಹರಿದಿನಗಳ ಆಚರಣೆ ಮೇಲೂ ಕರಿ ನೆರಳು ಬೀರಿದ್ದು, ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಮನೆಗಳಲ್ಲಿಯೇ ಹಬ್ಬ ಆಚರಿಸಬೇಕಾಗಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡದಂತೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಈ ಬಾರಿ ಗೌರಿ-ಗಣೇಶ ಹಬ್ಬ ಆಗಸ್ಟ್ 21 ಹಾಗೂ 22 ರಂದು ನಡೆಯಲಿದ್ದು, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿ ಕೊರೊನಾ ಸೋಂಕು ಮತ್ತಷ್ಟು ವ್ಯಾಪಕವಾಗಲಿದೆ ಎಂಬ ಕಾರಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.