alex Certify BIG NEWS: ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಏರಿಕೆ; 24 ಗಂಟೆಯಲ್ಲಿ 3,53,299 ಜನ ಡಿಸ್ಚಾರ್ಜ್; ಸಾವಿನ ಸಂಖ್ಯೆಯಲ್ಲೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಏರಿಕೆ; 24 ಗಂಟೆಯಲ್ಲಿ 3,53,299 ಜನ ಡಿಸ್ಚಾರ್ಜ್; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ಕೊರೊನಾ ಅಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,26,098 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,43,72,907ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,890 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,66,207ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿತರ ಪಾಲಿಗೆ ಆಪತ್ಭಾಂಧವನಾದ ಪ್ಲಾಸ್ಮಾ ದಾನಿ….! ಈವರೆಗೆ 15 ಬಾರಿ ಪ್ಲಾಸ್ಮಾ ನೀಡಿಕೆ

ಇನ್ನು ದೇಶದಲ್ಲಿ 36,73,802 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,04,32,898 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,53,299 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 16,93,093 ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 31,30,17,193 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 118,04,57,579 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...