
ಹೊಸೂರು: ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿದ ದರೋಡೆಕೋರರು 7 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದಿದೆ.
ಬೆಳಿಗ್ಗೆ 10 ಗಂಟೆಗೆ ಕಚೇರಿ ತೆರೆದ ಕೆಲ ಸಮಯದಲ್ಲೇ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿದ 6 ಜನರಿದ್ದ ಬಂದೂಕುಧಾರಿಗಳ ಗುಂಪು ಬ್ರ್ಯಾಂಚ್ ಮ್ಯಾನೇಜರ್ ಅವರನ್ನು ಬೆದರಿಸಿ, ಲಾಕರ್ ಓಪನ್ ಮಾಡಿಸಿ 25 ಕೆಜಿಗೂ ಹೆಚ್ಚು ಹಿನ್ನಾಭರಣ ಹಾಗೂ 96 ಸಾವಿರ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಕಚೇರಿ ಸಿಬ್ಬಂದಿಗೆ ಬಂದೂಕೂ ತೋರಿಸಿ ಬೆದರಿಸಿ ಕ್ಷಣಾರ್ಧದಲ್ಲಿ ಹಣ, ಚಿನ್ನಾಭರಣ ಲೂಟಿ ಮಾಡಿದ್ದಾರೆ. ಕಚೇರಿಯ ಸಿಸಿಮ ಟಿವಿಯಲ್ಲಿ ದೃಶ್ಯ ಸೆರೆಯಾಗಿದ್ದು, ಪೊಲಿಸರು ಪರಿಶೀಲನೆ ನಡೆಸಿದ್ದಾರೆ.