alex Certify BIG NEWS: ಕಳೆದ 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೊರೊನಾ ಪ್ರಕರಣಗಳೆಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಳೆದ 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೊರೊನಾ ಪ್ರಕರಣಗಳೆಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,738 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,10,46,914ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 138 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,705ಕ್ಕೆ ಏರಿಕೆಯಾಗಿದೆ.

ಕಾರು ಖರೀದಿದಾರರಿಗೆ SBI ನಿಂದ ಬಂಪರ್: ಆಕರ್ಷಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ

ಇನ್ನು ದೇಶದಲ್ಲಿ 1,51,708 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,07,38,501 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,799 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 7,93,383 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 21,38,29,658 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇನ್ನು ದೇಶದಲ್ಲಿ ಈವರೆಗೆ 1,26,71,163 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...