alex Certify BIG NEWS: 1,17,34,058ಕ್ಕೆ ಏರಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ ಸಾವಿನ ಸಂಖ್ಯೆಯಲ್ಲೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 1,17,34,058ಕ್ಕೆ ಏರಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮತ್ತೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 47,262 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,17,34,058ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 275 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ1,60,441ಕ್ಕೆ ಏರಿಕೆಯಾಗಿದೆ.

ಕೋವಿಶೀಲ್ಡ್ – ಕೋವ್ಯಾಕ್ಸಿನ್ ಲಸಿಕೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಇನ್ನು ದೇಶದಲ್ಲಿ 3,68,457 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,12,05,160 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 23,907 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ 10,25,628 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 23,64,38,861 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ದೇಶದಲ್ಲಿ ಈವರೆಗೆ 5,08,41,286 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...