alex Certify BIG NEWS: 13,90,592 ಜನರಿಗೆ ಲಸಿಕೆ ನೀಡಿಕೆ – 24ಗಂಟೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರೆಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 13,90,592 ಜನರಿಗೆ ಲಸಿಕೆ ನೀಡಿಕೆ – 24ಗಂಟೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರೆಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 14,256 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,06,39,684ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 152 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,53,184ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,85,662 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 10,300,838 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 17,130 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 13,90,592 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 8,37,095 ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 19,09,85,119 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...