ಮುಂಬೈ: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ದೇಶದಲ್ಲಿ ಬ್ಲ್ಯಾಕ್ ಫಂಗಸ್ ಮಹಾಮಾರಿ ಸೋಂಕಿತರನ್ನು ಇನ್ನಷ್ಟು ಹೈರಾಣಾಗುವಂತೆ ಮಾಡಿದೆ. ಇದೀಗ ಮಹಾರಾಷ್ಟ್ರದಲ್ಲಿ 1,500 ಜನರಲ್ಲಿ ಈ ಕಪ್ಪು ಶಿಲೀಂದ್ರ ಪ್ರಕರಣ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ 1500 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಚಿಕಿತ್ಸೆಗೆ ಔಷಧಿಯ ಅಭಾವ ಆರಂಭವಾಗಿದೆ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚೆ ನಡೆಸಲಿದ್ದು, ಕೊರೊನಾ ಸೋಂಕು, ಬ್ಲ್ಯಾಕ್ ಫಂಗಸ್ ನಿರ್ವಹಣೆ ನಿಟ್ಟಿನಲ್ಲಿ ಚರ್ಚಿಸಲಿದ್ದಾರೆ.
ಕುರಿಗಳೊಂದಿಗೆ ರಾಜ್ಯಪಾಲರ ನಿವಾಸದ ಮುಂದೆ ಕುರಿಗಾಹಿ ಪ್ರತಿಭಟನೆ
ಈಗಾಗಲೇ ಅತಿ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದ ಮಹಾರಾಷ್ಟ್ರಕ್ಕೆ ಈಗ ಬ್ಲ್ಯಾಕ್ ಫಂಗಸ್ ಆಘಾತ ಎದುರಾಗಿದ್ದು, ಜನರನ್ನು ಇನ್ನಿಲ್ಲದಂತೆ ಸಂಕಷ್ಟಕ್ಕೆ ತಳ್ಳುವಂತೆ ಮಾಡಿದೆ.