alex Certify BIG NEWS: 24 ಗಂಟೆಯಲ್ಲಿ ಕೊರೊನಾ ಸೋಂಕು ಪತ್ತೆಯಾದವರಿಗಿಂತ ಡಿಸ್ಚಾರ್ಜ್ ಆದವರೇ ಅಧಿಕ; ಗಣನೀಯವಾಗಿ ಕಡಿಮೆಯಾಗುತ್ತಿದೆ ಸೋಂಕಿತರ ಪತ್ತೆ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ ಕೊರೊನಾ ಸೋಂಕು ಪತ್ತೆಯಾದವರಿಗಿಂತ ಡಿಸ್ಚಾರ್ಜ್ ಆದವರೇ ಅಧಿಕ; ಗಣನೀಯವಾಗಿ ಕಡಿಮೆಯಾಗುತ್ತಿದೆ ಸೋಂಕಿತರ ಪತ್ತೆ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 22,065 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 99,06,165ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 354 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,43,709ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 3,39,820 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 94,22,636 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 34,477 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ 9,93,665 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 15,55,60,655 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...