
ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,81,386 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,49,65,463ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 4,106 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,74,390ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 35,16,997 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,11,74,076 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,78,741 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 15,73,515 ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 31,64,23,658 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 18,22,20,164 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.