ನವದೆಹಲಿ: ಕೊರೊನಾ ಅಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,62,727 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,37,03,665ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 4,120 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,58,317ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 37,10,525 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,97,34,823 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,52,181 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 17,72,14,256 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.