alex Certify BIG NEWS: 24 ಗಂಟೆಯಲ್ಲಿ 1,14,460 ಜನರಲ್ಲಿ ಕೊರೊನಾ ಪಾಸಿಟಿವ್; ಒಂದೇ ದಿನದಲ್ಲಿ 1,89,232 ಮಂದಿ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 1,14,460 ಜನರಲ್ಲಿ ಕೊರೊನಾ ಪಾಸಿಟಿವ್; ಒಂದೇ ದಿನದಲ್ಲಿ 1,89,232 ಮಂದಿ ಡಿಸ್ಚಾರ್ಜ್

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,14,460 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 2677 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,46,759 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 14,77,799 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,69,84,781 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,89,232 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 20,36,311 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 36,47,46,522 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 23,13,22,417 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...