alex Certify BIG NEWS: 24 ಗಂಟೆಯಲ್ಲಿ 2,40,842 ಜನರಲ್ಲಿ ಕೊರೊನಾ ಸೋಂಕು; 3,741 ಮಂದಿ ಮಹಾಮಾರಿಗೆ ಬಲಿ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 2,40,842 ಜನರಲ್ಲಿ ಕೊರೊನಾ ಸೋಂಕು; 3,741 ಮಂದಿ ಮಹಾಮಾರಿಗೆ ಬಲಿ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…?

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,40,842 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,65,30,132ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,741 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,99,266 ಕ್ಕೆ ಏರಿಕೆಯಾಗಿದೆ.

ಶಾಕಿಂಗ್​: ಕೊರೊನಾ 2ನೇ ಅಲೆ ವೇಳೆ ದೇಶದಲ್ಲಿ 400ಕ್ಕೂ ಅಧಿಕ ವೈದ್ಯರು ಬಲಿ

ಇನ್ನು ದೇಶದಲ್ಲಿ 28,05,399 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,34,25,467 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,55,102 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ 21,23,782 ಜನರಿಗೆಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 32,86,07,937 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ದೇಶದಲ್ಲಿ ಈವರೆಗೆ 19,33,72,819 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...