ನವದೆಹಲಿ: ಕೊರೊನಾ 2ನೇ ಅಲೆಗೆ ಭಾರತ ತತ್ತರಿಸುತ್ತಿದ್ದು, ಕಳೆದ 24 ಗಂಟೆಯಲ್ಲಿ 2,59,170 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 1,761 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,80,530ಕ್ಕೆ ಏರಿಕೆಯಾಗಿದೆ.
ಲಾಕ್ಡೌನ್ ಜಾರಿ ಮಾಡಿ ಎಂದ ಹೈಕೋರ್ಟ್ ಆದೇಶಕ್ಕೆ ಸೊಪ್ಪು ಹಾಕದ ಯೋಗಿ ಸರ್ಕಾರ
ಇನ್ನು ದೇಶದಲ್ಲಿ 20,31,977 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,31,08,582 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,54,761 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 15,19,486 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 26,94,14,035 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 11,11,79,578 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.