alex Certify BIG NEWS: 24 ಗಂಟೆಯಲ್ಲಿ 3,11,170 ಜನರಿಗೆ ಕೊರೊನಾ; 4,000ಕ್ಕೂ ಹೆಚ್ಚು ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 3,11,170 ಜನರಿಗೆ ಕೊರೊನಾ; 4,000ಕ್ಕೂ ಹೆಚ್ಚು ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,11,170 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,46,84,077ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 4,077 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,70,284ಕ್ಕೆ ಏರಿಕೆಯಾಗಿದೆ.

ಕೊರೋನಾ ಕರುಣಾಜನಕ ಘಟನೆ: ದಂಪತಿ ಸಾವು, 5 ದಿನದ ಹೆಣ್ಣುಮಗು ಅನಾಥ

ಇನ್ನು ದೇಶದಲ್ಲಿ 36,18,458 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,07,95,335 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,62,437 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 18,32,950 ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 31,48,50,143 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 18,22,20,164 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...