ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಸ್ಫೋಟಗೊಳ್ಳುತ್ತಿದೆ. ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,46,786 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,66,10,481ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 2,624 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,89,544 ಕ್ಕೆ ಏರಿಕೆಯಾಗಿದೆ.
ಖಾಸಗಿ ಶಾಲೆ ಶಿಕ್ಷಕರಿಗೆ ಬಿಗ್ ಶಾಕ್: ಅನೇಕರ ಕೆಲಸಕ್ಕೆ ಕುತ್ತು ತಂದ ಕೊರೊನಾ
ಇನ್ನು ದೇಶದಲ್ಲಿ 25,52,940 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,38,67,997 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,19,838 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 13,83,79,832 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.