alex Certify BIG NEWS: 24 ಗಂಟೆಯಲ್ಲಿ 3,52,991 ಜನರಲ್ಲಿ ಕೊರೊನಾ ಸೋಂಕು ದೃಢ; 2,812 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 3,52,991 ಜನರಲ್ಲಿ ಕೊರೊನಾ ಸೋಂಕು ದೃಢ; 2,812 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಸತತ 5ನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ. ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,52,991 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 2812 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,95,123 ಕ್ಕೆ ಏರಿಕೆಯಾಗಿದೆ.

ಕೊರೊನಾ ಲಸಿಕೆ ಹಾಕಿಸಿಕೊಂಡಿರಾ…? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

ಇನ್ನು ದೇಶದಲ್ಲಿ 28,13,658 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,43,04,382 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,19,272 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 14,02,367 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 27,93,21,177 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 14,19,11,223 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...