ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,57,299 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,62,89,290ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 4,194 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,95,525 ಕ್ಕೆ ಏರಿಕೆಯಾಗಿದೆ.
ಸಿಸಿ ಕ್ಯಾಮೆರಾದಲ್ಲಿ ಬಯಲಾಯ್ತು ರಹಸ್ಯ: ಸರ್ಕಾರಿ ಆಸ್ಪತ್ರೆಯಲ್ಲಿದ್ದ 500 ಕೋವಿಶೀಲ್ಡ್ ಲಸಿಕೆ ಬಾಟಲ್ ನಾಪತ್ತೆ
ಇನ್ನು ದೇಶದಲ್ಲಿ 29,23,400 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,30,70,365 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,57,630 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ 20,66,285 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 32,64,84,155 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ದೇಶದಲ್ಲಿ ಈವರೆಗೆ 19,33,72,819 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.