alex Certify BIG NEWS: 5 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಒಂದೇ ದಿನ 20 ಸಾವಿರಕ್ಕಿಂತ ಕೆಳಗಿಳಿದ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಒಂದೇ ದಿನ 20 ಸಾವಿರಕ್ಕಿಂತ ಕೆಳಗಿಳಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ಕಳೆದ 24 ಗಂಟೆಯಲ್ಲಿ 19,556 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,00,75,116ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 301 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,46,111ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,92,518 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 96,36,487 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 30,376 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ 10,72,228 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 16,31,70,557 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...