ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,713 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,08,14,304ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 95 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,54,918ಕ್ಕೆ ಏರಿಕೆಯಾಗಿದೆ.
‘ಕೊರೊನಾ’ ಲಸಿಕೆ ಸ್ವೀಕರಿಸುತ್ತಿದ್ದಂತೆಯೇ ಬದಲಾಯ್ತು ಭಾಷೆ…!
ಇನ್ನು ದೇಶದಲ್ಲಿ 1,48,590 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,05,10,796 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 14,488 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆಯೊಂದೇ ದಿನ 7,40,794 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 20,06,72,589 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 54,16,849 ಜನರಿಗೆ ಲಸಿಕೆ ಹಾಕಲಾಗಿದೆ.