alex Certify BIG NEWS: 88 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ – ಒಂದೇ ದಿನದಲ್ಲಿ ಪತ್ತೆಯಾದ ಹೊಸ ಪ್ರಕರಣಗಳೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 88 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ – ಒಂದೇ ದಿನದಲ್ಲಿ ಪತ್ತೆಯಾದ ಹೊಸ ಪ್ರಕರಣಗಳೆಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕೊರೊನಾ ಹಾವಳಿ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 41,100 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 88,14,579ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 447 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,29,635ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,79,216 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 82,05,728 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 42,156 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 8,05,589 ಜನರಲ್ಲಿ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 12,48,36,819 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...