ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, 10ನೇ ತರಗತಿ ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್, ಸಿಬಿಎಸ್ಇ ಬೋರ್ಡ್ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಲಾಯಿತು.
ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷಗಳು ಹಾಗೂ ಪೋಷಕರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ಇ ಪರೀಕ್ಷೆ ರದ್ದು ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.