alex Certify ಬಿಗ್ ನ್ಯೂಸ್: ಕೊರೊನಾ ಹೊತ್ತಲ್ಲೇ ಎಲೆಕ್ಷನ್ – ಬಿಹಾರ ವಿಧಾನಸಭೆ, ವಿವಿಧ ರಾಜ್ಯಗಳ ಉಪ ಚುನಾವಣೆ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಕೊರೊನಾ ಹೊತ್ತಲ್ಲೇ ಎಲೆಕ್ಷನ್ – ಬಿಹಾರ ವಿಧಾನಸಭೆ, ವಿವಿಧ ರಾಜ್ಯಗಳ ಉಪ ಚುನಾವಣೆ ಘೋಷಣೆ ಸಾಧ್ಯತೆ

ನವದೆಹಲಿ: ಕೊರೋನಾ ಹೊತ್ತಲ್ಲಿ ಚುನಾವಣೆ ನಡೆಸಲು ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ ಇಂದು ಮಧ್ಯಾಹ್ನ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.

ದೆಹಲಿ ಚುನಾವಣಾ ಆಯೋಗದ ಕಚೇರಿಯಿಂದ ಮಧ್ಯಾಹ್ನ 12.30 ಕ್ಕೆ ಪತ್ರಿಕಾಗೋಷ್ಠಿ ಕರೆಯಲಾಗಿದ್ದು, ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗುವುದು. ಇದೇ ವೇಳೆ ವಿವಿಧ ರಾಜ್ಯಗಳ ಉಪ ಚುನಾವಣೆಗಳಿಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೊರೊನಾ ಕಾರಣದಿಂದ ಮಾರ್ಗಸೂಚಿಯನ್ವಯ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ನವೆಂಬರ್ ಅಂತ್ಯದೊಳಗೆ ಬಿಹಾರ ವಿಧಾನಸಭೆಗೆ ಹೊಸ ಸದಸ್ಯರನ್ನು ಆಯ್ಕೆ ಮಾಡಬೇಕಿದ್ದು, ಅನೇಕ ಹಂತಗಳಲ್ಲಿ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...