ಪಾಟ್ನಾ: ಬಿಹಾರದಲ್ಲಿ ಇಂದು ಮೊದಲ ಹಂತದ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಜೆಡಿಯು-ಬಿಜೆಪಿ ಮೈತ್ರಿ ಕೂಟ, ಆರ್ಜೆಡಿ -ಕಾಂಗ್ರೆಸ್ ಮಿತ್ರ ಪಕ್ಷಗಳ ನಡುವೆ ನೇರ ಹಣಾಹಣಿ ನಡೆಯುತ್ತಿದೆ.
243 ವಿಧಾನಸಭೆ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. 2.14 ಕೋಟಿ ಮತದಾರರು ಮತ ಚಲಾವಣೆ ಮಾಡಲಿದ್ದಾರೆ. 1066 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೆಡಿಯು 35, ಬಿಜೆಪಿ 29, ಆರ್ಜೆಡಿ 42, ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಚಿರಾಗ್ ಪಾಸ್ವಾನ್ ನೇತೃತ್ವದ ಎಲ್.ಜೆ.ಪಿ. ಅಭ್ಯರ್ಥಿಗಳು 41 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದಾರೆ. ಕೊರೋನಾ ಮುಂಜಾಗ್ರತೆ ಕ್ರಮಗಳೊಂದಿಗೆ ಚುನಾವಣೆ ಆಯೋಗದ ಮಾರ್ಗಸೂಚಿ ಅನ್ವಯ ಮತದಾನ ನಡೆಯಲಿದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ.