ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ. ಇದಕ್ಕೆ ಕಾಂಗ್ರೆಸ್ ನಾಯಕರು ಸೇರಿದಂತೆ ವಿಪಕ್ಷಗಳ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಆಯೋಗ ಸ್ಪಷ್ಟನೆ ನೀಡಿ, ಉಚಿತವಾಗಿ ಲಸಿಕೆ ಘೋಷಣೆ ಮಾಡಿರುವುದು ನೀತಿಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ತಿಳಿಸಿದೆ.
ಬಿಹಾರ ಚುನಾವಣೆಯಲ್ಲಿ ಕೊರೊನಾ ಲಸಿಕೆಯನ್ನು ಚುನಾವಣೆ ವಿಷಯವನ್ನಾಗಿ ಮಾಡಿಕೊಳ್ಳಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡಿದ್ದವು. ಬಿಜೆಪಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದವು.
ಈ ಬಗ್ಗೆ ಸ್ಪಷ್ಟನೆ ನೀಡಿದ ಆಯೋಗ, ಇದು ನೀತಿ ಸಂಹಿತೆ ಉಲ್ಲಂಘನೆ ಅಲ್ಲವೆಂದು ತಿಳಿಸಿದೆ. ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು ವಿಚಾರಣೆ ನಡೆಸಿದ ಆಯೋಗ ಚುನಾವಣೆಯಲ್ಲಿ ಬಿಜೆಪಿ ನೀಡಿರುವ ಭರವಸೆ ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ಹೇಳಿದೆ.