ಬಿಹಾರದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಹೆಚ್ಚುತ್ತಿರುವ ಪ್ರಕರಣವನ್ನು ನಿಯಂತ್ರಣಕ್ಕೆ ತರಲು ಲಾಕ್‌ಡೌನ್ ವಿಸ್ತರಿಸಲಾಗಿದೆ. ನಿತೀಶ್ ಸರ್ಕಾರ ಸೆಪ್ಟೆಂಬರ್ 6 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸಿದೆ. ಈ ಮೊದಲು ಆಗಸ್ಟ್ 16 ರವರೆಗೆ ಲಾಕ್ ಡೌನ್ ಜಾರಿಯಲ್ಲಿತ್ತು.
ಬಿಹಾರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾ ಕಾಣಿಸಿಕೊಂಡಿದೆ. ಇದ್ರಲ್ಲಿ 461 ಜನರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 72 ಸಾವಿರಕ್ಕೂ ಹೆಚ್ಚು ಕೊರೊನಾ ರೋಗಿಗಳು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 31 ಸಾವಿರಕ್ಕಿಂತ ಹೆಚ್ಚಾಗಿದೆ. ಕೊರೊನಾ ಹೆಚ್ಚುತ್ತಿರುವ ಕಾರಣ ಲಾಕ್ ಡೌನ್ ವಿಸ್ತರಣೆಯಾಗಿದ್ದು, ನಿಯಮಗಳಲ್ಲಿ ಸ್ವಲ್ಪ ಸಡಿಲಿಕೆ ಮಾಡಲಾಗಿದೆ.
ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಮುಂದುವರೆಯಲಿದೆ. ಅಗತ್ಯ ವಸ್ತುಗಳ ಅಂಗಡಿಗಳು ಬಾಗಿಲು ತೆರೆಯಲಿವೆ. ಆದ್ರೆ ಶಾಪಿಂಗ್ ಮಾಲ್‌ಗಳು, ರಾಜ್ಯದ ಧಾರ್ಮಿಕ ಸ್ಥಳಗಳ ಬಾಗಿಲು ಮುಚ್ಚಿರಲಿದೆ.