alex Certify
ಕನ್ನಡ ದುನಿಯಾ       Mobile App
       

Kannada Duniya

ಬಂಗಾಳದ ಪೊಲೀಸ್ ಕಸ್ಟಡಿಯಲ್ಲಿ ಬಿಜೆಪಿ ಬೂತ್ ಉಪಾಧ್ಯಕ್ಷ ಸಾವು

ಕೋಲ್ಕತಾ: ಬಿಜೆಪಿ ಬೂತ್ ಉಪಾಧ್ಯಕ್ಷನೊಬ್ಬ ಪಶ್ಚಿಮ ಬಂಗಾಳ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾನೆ ಎಂದು ಬಿಜೆಪಿ ಆರೋಪಿಸಿದೆ. ಪಕ್ಷ ಈ ಸಂಬಂಧ ಶುಕ್ರವಾರ ಟ್ವೀಟ್ ಮಾಡಿದೆ.‌ ಇದು ಪಕ್ಕಾ ಕೊಲೆಯಾಗಿದ್ದು, ನಮಗೆ ನ್ಯಾಯ ಬೇಕು ಎಂದು ಪಕ್ಷ ಆಗ್ರಹಿಸಿದೆ.

ಮದನ್ ಗೊಡಾಯ್ ಎಂಬಾತನ ಮೇಲೆ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಆತನ ಮ‌ನೆಯಿಂದಲೇ ಎತ್ತಿ ಹಾಕಿಕೊಂಡು ಹೋಗಿದ್ದಾರೆ. ಠಾಣೆಯಲ್ಲಿ ಹೊಡೆದು ದಾರುಣವಾಗಿ ಹಲ್ಲೆ ನಡೆಸಿದ ಪರಿಣಾಮ ಆತ ಪೊಲೀಸ್ ಕಸ್ಟಡಿಯಲ್ಲೇ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಬಿಜೆಪಿ‌ ಟ್ವೀಟ್ ಮಾಡಿದೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮುಖಂಡತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಅಲ್ಲಿ ಬಿಜೆಪಿ ಹಾಗೂ ಸಿಎಂ ಮಮತಾ ದೀದಿ ನಡುವೆ ಸದಾ ಕೆಸರೆರಚಾಟ ಗಲಾಟೆ ನಡೆದೇ ಇರುತ್ತದೆ.

Subscribe Newsletter

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...