ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಕೆ.ಅಣ್ಣಾಮಲೈ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸ್ವತಃ ಮಾಹಿತಿ ಹಂಚಿಕೊಂಡಿರುವ ಅಣ್ಣಾಮಲೈ, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
ಜಾತ್ರೆಗೆ ಬಂದ ಭಕ್ತರಿಗೆ ಶಾಕ್; ಪ್ರಸಿದ್ಧ ಉಚ್ಚಂಗಿ ದುರ್ಗಾ ಜಾತ್ರೆ ರದ್ದು
ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ 2019ರಲ್ಲಿ ಏಕಾಏಕಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದ್ದರು. ಮಾರ್ಚ್ 6ರಂದು ನಡೆದ ಚುನಾವಣೆಯಲ್ಲಿ ತಮಿಳುನಾಡಿನ ಅರವಕುರಿಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಮೇ 2ರಂದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.