ಇನ್ನು ಎರಡು ಮೂರು ತಿಂಗಳಲ್ಲಿ ಬಿಜೆಪಿಯು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ಧನ್ವೆ ಹೇಳುವ ಮೂಲಕ ಅಲ್ಲಿನ ಅಘಾಡಿ ಸರ್ಕಾರಕ್ಕೆ ಚಳಿ ಹುಟ್ಟಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾವ್ ಸಾಹೇಬ್, ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಕಾರ್ಯಕರ್ತರು ಭಾವಿಸಬಾರದು ಎಂದು ಹೇಳಿದರು.
ಜೊತೆಗೆ ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ, ಮುಂಬರುವ ಎರಡು ಮೂರು ತಿಂಗಳಲ್ಲಿ ನಮ್ಮ ಸರ್ಕಾರ ಮಹಾರಾಷ್ಟ್ರದಲ್ಲಿ ರಚನೆಯಾಗುತ್ತದೆ. ಹೇಗೆ ರಚನೆಯಾಗುತ್ತೆ ಎಂದು ಈಗ ನಿಮಗೆ ಹೇಳುವುದಿಲ್ಲ ಎಂದರು.
ಆ ರಾಜ್ಯದ ವಿಧಾನ ಪರಿಷತ್ ಚುನಾವಣೆಯನ್ನು ಪ್ರಸ್ತಾಪಿಸಿದ ಅವರು, ನಾವು ಚುನಾವಣೆಯಲ್ಲಿ ಗೆಲ್ಲಬೇಕು. ವಿಧಾನಪರಿಷತ್ತಿನಲ್ಲಿ ಬಿಜೆಪಿಗೆ ಬಹುಮತ ಇರಬೇಕು. ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಪರಸ್ಪರ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.