ಬಾರಾಬಂಕಿ: ಅತ್ಯಾಚಾರ ಪ್ರಕರಣಗಳಿಂದ ಸದಾ ಸುದ್ದಿಯಲ್ಲಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಅದೇ ಮಾದರಿಯ ಘಟನೆ ನಡೆದಿದೆ. ಬಾರಾಬಂಕಿ ಜಿಲ್ಲೆಯ ಜುತೆಬಾಗದಿಂದ ನಾಪತ್ತೆಯಾಗಿದ್ದ ಯುವತಿ ಚೀಲ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಯುವತಿಯ ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ ಎಂದು ಬಾರಾಬಂಕಿ ಎಸ್ ಪಿ ಅರವಿಂದ ಚತುರ್ವೇದಿ ತಿಳಿಸಿದ್ದಾರೆ.
ನಾಪತ್ತೆಯಾಗಿ ಎರಡು ದಿನದ ಬಳಿಕ ಶವ ಪತ್ತೆಯಾಗಿದೆ. ಯುವತಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಕಿಡ್ನಾಪಿಂಗ್ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬುದು ಖಚಿತವಾಗಲಿದೆ. ಎಲ್ಲ ಮಾದರಿಯಲ್ಲಿ ತನಿಖೆ ನಡೆದಿದೆ ಎಂದು ಎಸ್ಪಿ ಚತುರ್ವೇದಿ ಹೇಳಿದ್ದಾರೆ.