alex Certify BREAKING NEWS: ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧಾರ

ನವದೆಹಲಿ: ಇಂದು ನಡೆದ CWC (ಕಾಂಗ್ರೆಸ್ ವರ್ಕಿಂಗ್ ಕಮಿಟಿ) ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಜೂನ್ 23ರಂದು ಎಐಸಿಸಿ ಅಧ್ಯಕ್ಷ ಸ್ಥಾನ ಆಯ್ಕೆಗೆ ಚುನಾವಣೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

2 ವಾರ ಸಂಪೂರ್ಣ ಲಾಕ್ ಡೌನ್ ಮಾಡಿ; ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ರಾಹುಲ್ ಗಾಂಧಿ 2019ರಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಚುನಾವಣೆ ಮೂಲಕ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...