alex Certify BREAKING NEWS: ಗಣನೀಯ ಸಂಖ್ಯೆಯಲ್ಲಿ ಇಳಿಕೆಯಾದ ಕೋವಿಡ್ ಸಂಖ್ಯೆ – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್, ಸಕ್ರಿಯ ಪ್ರಕರಣಗಳ ಬಗ್ಗೆ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಗಣನೀಯ ಸಂಖ್ಯೆಯಲ್ಲಿ ಇಳಿಕೆಯಾದ ಕೋವಿಡ್ ಸಂಖ್ಯೆ – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್, ಸಕ್ರಿಯ ಪ್ರಕರಣಗಳ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,177 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,03,23,965ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 217 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,49,435ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,47,220 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 99,27,310 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 20,923 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 9,58,125 ಜನರನ್ನು ಕೋವಿಡ್ ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಲಾಗಿದ್ದು, ದೇಶದಲ್ಲಿ ಈವರೆಗೆ 17,48,99,783 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...