![](https://kannadadunia.com/wp-content/uploads/2020/06/corona-Virus-1-1.jpg)
ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 15,413 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ಈ ಅವಧಿಯಲ್ಲಿ 306 ಮಂದಿ ಮೃತಪಟ್ಟಿದ್ದಾರೆ.
ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 4,10,461 ತಲುಪಿದ್ದು, ಉತ್ತರದವರ ಸಂಖ್ಯೆ 13,254 ಕ್ಕೆ ಮುಟ್ಟಿದೆ. ಸಮಾಧಾನಕರ ಸಂಗತಿಯೆಂದರೆ ಸೋಂಕಿತರ ಪೈಕಿ 2,27,756 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗ 5ನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು, ಜೂನ್ 30ಕ್ಕೆ ಅಂತ್ಯಗೊಳ್ಳಲಿದೆ. ಇದರ ಮಧ್ಯೆ ಸಾಕಷ್ಟು ಸಡಿಲಿಕೆ ಮಾಡಿರುವ ಕಾರಣ ಸೋಂಕಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದೆ.