ಕೊಪ್ಪಳ: ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನಡೆಸಿದ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಇದು ರೈತರ ಕೃತ್ಯವಲ್ಲ ಭಯೋತ್ಪಾದಕರ ಕೃತ್ಯ ಎಂದು ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಇಂದು ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲ. ರೈತರ ಹೆಸರಲ್ಲಿ ಉಗ್ರರನ್ನು ಕರೆಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ಹಿಂದೆ ಬೇರೆ ಬೇರೆ ದೇಶಗಳ ಕೈವಾಡವಿದ್ದು, ಪಾಕಿಸ್ತಾನ ಹಾಗೂ ಕಾಂಗ್ರೆಸ್ ನವರ ಬೆಂಬಲವಿದೆ ಎಂದು ಗುಡುಗಿದರು.
ನಿಜವಾದ ರೈತರಾರೂ ಪ್ರತಿಭಟನೆ ನಡೆಸುತ್ತಿಲ್ಲ. ಧರಣಿ, ಸತ್ಯಾಗ್ರಹದ ಹಿಂದೆ ಭಯೋತ್ಪಾದಕರ ಕುಮ್ಮಕ್ಕಿದೆ. ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ. ಉಗ್ರರನ್ನು ಕರೆತಂದು ರೈತರ ಹೆಸರಲ್ಲಿ ಭಯೋತ್ಪಾದನೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಜನಪ್ರಿಯತೆ ಸಹಿಸದೇ ಮಾಡುತ್ತಿರುವ ಕೃತ್ಯವಿದು ಎಂದು ವಾಗ್ದಾಳಿ ನಡೆಸಿದ್ದಾರೆ.