2021-22ನೇ ಸಾಲಿನ ಕೇಂದ್ರ ಬಜೆಟ್ನ ಸಮರ್ಪಕ ಅನುಷ್ಠಾನದಿಂದಾಗಿ ಆತ್ಮ ನಿರ್ಭರ್ ಭಾರತ ನಿರ್ಮಾಣವಾಗಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ
ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಕುರಿತ ಚರ್ಚೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, ಕೋವಿಡ್ 19ನಿಂದಾಗಿ ಸರ್ಕಾರದ ಮುಂದೆ ಹಲವಾರು ಸವಾಲುಗಳಿವೆ. ಹೀಗಾಗಿ ಈ ಬಾರಿಯ ಕೇಂದ್ರ ಬಜೆಟ್ ಆರ್ಥಿಕತೆ ಸುಧಾರಣೆಯ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರವು ಸಾಂಕ್ರಾಮಿಕ ರೋಗದ ಪರಿಸ್ಥಿತಿಯಲ್ಲೂ ದೇಶದ ಆರ್ಥಿಕತೆಯನ್ನ ಉತ್ತೇಜಿಸಲು ಬೇಕಾದ ಅಗತ್ಯ ಸುಧಾರಣೆಗಳನ್ನ ಕೈಗೊಂಡಿದೆ. ಅಲ್ಲದೇ ಈ ಬಜೆಟ್ ದೇಶಕ್ಕೆ ದೀರ್ಘಾವಧಿಯ ಬೆಳವಣಿಗೆಯನ್ನ ನೀಡಲಿದೆ ಎಂದು ಹೇಳಿದ್ದಾರೆ.