ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕೆಲಸ ನಡೆಯುತ್ತಿದೆ. ಇದಕ್ಕೆ ಉದ್ಯಮಿಯೊಬ್ಬರು ಪೊಕ್ಲೈನ್ ಯಂತ್ರವನ್ನು ನೀಡಿದ್ದಾರೆ. ಮಧ್ಯಪ್ರದೇಶದ ಉದ್ಯಮಿ ಇದನ್ನು ಉಡುಗೊರೆಯಾಗಿ ನೀಡಿದ್ದಾರೆ.
ಈ ಯಂತ್ರವನ್ನು ಟ್ರಾಲಿ ಮೂಲಕ ಅಯೋಧ್ಯೆಗೆ ತರಲಾಗಿದೆ. ಇದ್ರ ಮೇಲೆ ರಾಮನ ಚಿತ್ರವನ್ನು ಮುದ್ರಿಸಲಾಗಿದೆ. ದೇವಾಲಯ ನಿರ್ಮಾಣ ಕಾರ್ಯ ಮುಗಿಯುವವರೆಗೂ ಯಂತ್ರ ಅಲ್ಲಿಯೇ ಇರುತ್ತದೆ ಎಂದು ದಾನ ನೀಡಿದ ಉದ್ಯಮಿ ದಿನೇಶ್ ಬೇನಿವಾಲ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 5ರಂದು ರಾಮ ಮಂದಿರದ ಭೂಮಿ ಪೂಜೆ ನೆರವೇರಿಸಿದ್ದಾರೆ. ಅದಾದ ನಂತ್ರ ನಿರ್ಮಾಣ ಕಾರ್ಯ ಶುರುವಾಗಿದೆ.