
ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆ ವಾಮಂಜೂರು ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜನಾರ್ದನ್, ಪುತ್ರ ವರುಣ್ ಮತ್ತು ಕಿಶನ್ ಮೃತಪಟ್ಟವರು. ರತ್ನಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.