ವಿಧಾನಸಭಾ ಚುನಾವಣೆಗೆ ಇನ್ನೊಂದು ದಿನ ಬಾಕಿ ಇರುವ ಬೆನ್ನಲ್ಲೇ ತಮಿಳುನಾಡಿನಲ್ಲಿ 428 ಕೋಟಿ ರೂಪಾಯಿ ಮೌಲ್ಯದ ನಗದು ಹಾಗೂ ಬೆಲೆ ಬಾಳುವ ಲೋಹಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಒಟ್ಟು 428 ಕೋಟಿ ರೂಪಾಯಿಗಳಲ್ಲಿ 225.5 ಕೋಟಿ ನಗದು ಹಾಗೂ 176.5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಸೇರಿದಂತೆ ಬೆಲೆ ಬಾಳುವ ಲೋಹಗಳು ಸೇರಿವೆ. ಇದು ಮಾತ್ರವಲ್ಲದೇ ದಾಳಿ ವೇಳೆ ಅಕ್ರಮ ಮದ್ಯವನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ಹಿನ್ನೆಲೆ ರಾಜ್ಯದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. ರಾಜ್ಯ ರಾಜಧಾನಿ ಚೆನ್ನೈನ ವಿವಿಧ ಭಾಗಗಳಲ್ಲಿ ದಾಳಿ ನಡೆಸಲಾಗಿದೆ.
ಇನ್ನು ಈ ವಿಚಾರವಾಗಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ, ಕಯೂರ್ನಲ್ಲಿ ದಾಖಲೆಯ ಪ್ರಮಾಣದ ದಾಳಿ ನಡೆಸಲಾಗಿದ್ರೆ, ಕೊಯಂಬತ್ತೂರು, ತಿರಪ್ಪೂರು ಹಾಗೂ ಚೆನ್ನೈನಲ್ಲೂ ಅಕ್ರಮ ಸಂಪತ್ತು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ರು.