alex Certify ಎದೆ ನಡುಗಿಸುತ್ತೆ ಎಲ್ಲರೆದುರೇ ನಡೆದ ಈ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎದೆ ನಡುಗಿಸುತ್ತೆ ಎಲ್ಲರೆದುರೇ ನಡೆದ ಈ ಘಟನೆ

ತೆಲಂಗಾಣದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೈದರಾಬಾದ್​ನಲ್ಲೂ ವರುಣನ ಆರ್ಭಟ ಜೋರಾಗಿದ್ದು ಭಾರೀ ಮಳೆಗೆ ಸಿನೀಮಿಯ ರೀತಿಯಲ್ಲಿ ವ್ಯಕ್ತಿಯೊಬ್ಬ ಕೊಚ್ಚಿಕೊಂಡು ಹೋಗಿದ್ದಾನೆ.

ಫಲಕ್ನುಮಾ ಬಳಿಕ ಬಾರ್ಮಾಸ್​ ಎಂಬಲ್ಲಿ ಈ ಅವಘಡ ಸಂಭವಿಸಿದೆ. ನೀರಿನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿ ಸಹಾಯಕ್ಕಾಗಿ ಅಂಗಲಾಚಿದ್ದಾನೆ. ಇಬ್ಬರು ಕೊಚ್ಚಿಹೋಗಿದ್ದ ವ್ಯಕ್ತಿಯನ್ನ ರಕ್ಷಿಸಲು ಯತ್ನಿಸಿದರಾದರೂ ಯಾವುದೇ ಪ್ರಯೋಜನವಾಗಿಲ್ಲ. ವ್ಯಕ್ತಿಯ ರಕ್ಷಣೆಗೆಂದು ಟೈರ್​ಗಳನ್ನ ಎಸೆದರೂ ಸಹ ಆತ ನೀರಿನಲ್ಲಿ ಕೊಚ್ಚಿಕೊಂಡೇ ಹೋಗಿದ್ದಾನೆ. ಆತ ಬದುಕಿದ್ದಾನಾ ಇಲ್ಲವಾ ಅನ್ನೋದ್ರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕಳೆದ 24 ಗಂಟೆಗಳಲ್ಲಿ ಹೈದರಾಬಾದ್​ನಲ್ಲಿ 24 ಸೆಂ.ಮೀ ಮಳೆ ದಾಖಲಾಗಿದೆ.ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಅಂತಾ ತೆಲಂಗಾಣ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್​ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...