ದೇಶದಲ್ಲೇ ಸಂಚಲನ ಮೂಡಿಸಿದ್ದ ಹತ್ರಾಸ್ ಪ್ರಕರಣದಲ್ಲಿ ಆರೋಪಿಗಳೆಂದು ಗುರುತಿಸಲ್ಪಟ್ಟಿರುವ ನಾಲ್ವರು ಮೇಲ್ಜಾತಿ ಪುರುಷರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಚಾರ್ಜ್ಶೀಟ್ನಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ನಮೂದಿಸಲಾಗಿದೆ. ಉತ್ತರ ಪ್ರದೇಶ ಪೊಲೀಸರು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದರು.
ಆದರೆ ಸಂತ್ರಸ್ತೆಯನ್ನ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಸಿಬಿಐ ಹೇಳಿದೆ. ಸೆಕ್ಷನ್ 376 ಡಿ, ಸೆಕ್ಷನ್ 302, 354 ಹಾಗೂ 376 ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
19 ವರ್ಷದ ದಲಿತ ಯುವತಿ ಸೆಪ್ಟೆಂಬರ್ 14ರಂದು ಹತ್ರಾಸ್ನಲ್ಲಿ ನಾಲ್ವರು ಪುರುಷರಿಂದ ಅತ್ಯಾಚಾರಕ್ಕೊಳಗಾಗಿದ್ದಳು. ಸೆಪ್ಟೆಂಬರ್ 29ರಂದು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನಳಾಗಿದ್ದಳು.