alex Certify ಹತ್ರಾಸ್​ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹತ್ರಾಸ್​ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ

ದೇಶದಲ್ಲೇ ಸಂಚಲನ ಮೂಡಿಸಿದ್ದ ಹತ್ರಾಸ್​ ಪ್ರಕರಣದಲ್ಲಿ ಆರೋಪಿಗಳೆಂದು ಗುರುತಿಸಲ್ಪಟ್ಟಿರುವ ನಾಲ್ವರು ಮೇಲ್ಜಾತಿ ಪುರುಷರ ವಿರುದ್ಧ ಸಿಬಿಐ ಚಾರ್ಜ್ ಶೀಟ್​ ಸಲ್ಲಿಕೆ ಮಾಡಿದೆ. ಚಾರ್ಜ್​ಶೀಟ್​ನಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ನಮೂದಿಸಲಾಗಿದೆ. ಉತ್ತರ ಪ್ರದೇಶ ಪೊಲೀಸರು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದರು.

ಆದರೆ ಸಂತ್ರಸ್ತೆಯನ್ನ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಸಿಬಿಐ ಹೇಳಿದೆ. ಸೆಕ್ಷನ್​ 376 ಡಿ, ಸೆಕ್ಷನ್​ 302, 354 ಹಾಗೂ 376 ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

19 ವರ್ಷದ ದಲಿತ ಯುವತಿ ಸೆಪ್ಟೆಂಬರ್​ 14ರಂದು ಹತ್ರಾಸ್​ನಲ್ಲಿ ನಾಲ್ವರು ಪುರುಷರಿಂದ ಅತ್ಯಾಚಾರಕ್ಕೊಳಗಾಗಿದ್ದಳು. ಸೆಪ್ಟೆಂಬರ್​ 29ರಂದು ದೆಹಲಿಯ ಸಫ್ದರ್​ಜಂಗ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನಳಾಗಿದ್ದಳು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...