ಕೊರೊನಾ ಮಹಾಮಾರಿ ಕಾರಣಕ್ಕೆ ಮಾರ್ಚ್ ತಿಂಗಳಿನಿಂದ ಶಾಲಾ-ಕಾಲೇಜುಗಳು ಮುಚ್ಚಲ್ಪಟ್ಟಿದ್ದು, ಈವರೆಗೂ ಆರಂಭವಾಗಿಲ್ಲ. ಆನ್ಲೈನ್ ತರಗತಿಗಳು ನಡೆಯುತ್ತಿದ್ದು, 2021 ನೇ ಸಾಲಿನ ಪರೀಕ್ಷೆಗಳು ನಿಗದಿತ ವೇಳೆಯಲ್ಲಿ ನಡೆಯುತ್ತದೋ ಇಲ್ಲವೋ ಎಂಬ ಗೊಂದಲದಲ್ಲಿ ವಿದ್ಯಾರ್ಥಿಗಳಿದ್ದರು.
ಇದೀಗ ಸಿ.ಬಿ.ಎಸ್.ಸಿ. ಕಾರ್ಯದರ್ಶಿ ಅನುರಾಗ್ ತ್ರಿಪಾಠಿ 2021 ನೇ ಸಾಲಿನ 10 ಮತ್ತು 12 ನೇ ತರಗತಿ ಪರೀಕ್ಷೆಗಳ ಕುರಿತಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ಪರೀಕ್ಷೆಗಳನ್ನು ಮುಂದೂಡುವ ಅಥವಾ ರದ್ದುಪಡಿಸುವ ಪ್ರಶ್ನೆಯೇ ಇಲ್ಲ. ಸದ್ಯದಲ್ಲೇ 10 ಮತ್ತು 12ನೇ ತರಗತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಹೀಗಾಗಿ 10 ಮತ್ತು 12ನೇ ತರಗತಿ ಪರೀಕ್ಷೆಗಳು ಈ ಮೊದಲಿನಂತೆ ನಿಗದಿತ ವೇಳಾಪಟ್ಟಿಯಂತೆ ನಡೆಯುವುದು ನಿಶ್ಚಿತವಾಗಿದೆ. ಇದೇ ಮಾನದಂಡ ಇತರೆ ತರಗತಿ ಪರೀಕ್ಷೆಗಳಿಗೂ ಅನ್ವಯಿಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ನಷ್ಟವಾಗಬಾರದೆಂಬ ಕಾರಣಕ್ಕೆ ಇಂಥದೊಂದು ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ.