alex Certify BIG NEWS: ಸಿಬಿಎಸ್ಇ 10 ನೇ ತರಗತಿ ಪರೀಕ್ಷೆ ರದ್ದುಪಡಿಸಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಬಿಎಸ್ಇ 10 ನೇ ತರಗತಿ ಪರೀಕ್ಷೆ ರದ್ದುಪಡಿಸಿದ ಸರ್ಕಾರ

ನವದೆಹಲಿ: ಲಾಕ್ ಡೌನ್ ಜಾರಿ ಮಾಡಿದ್ದರಿಂದ ಮುಂದೂಡಿಕೆಯಾಗಿದ್ದ ಸಿಬಿಎಸ್ಇ 10 ನೇ ತರಗತಿ ಬಾಕಿ ವಿಷಯಗಳ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ.

ಕೊರೋನಾ ಬಿಕ್ಕಟ್ಟು ಕಾರಣದಿಂದ 10 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬಾಕಿ ವಿಷಯಗಳ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದುಮಾಡಿದೆ. ದೇಶದ ಯಾವುದೇ ರಾಜ್ಯದಲ್ಲಿ ಉಳಿದ ವಿಷಯಗಳ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ.

ಈಶಾನ್ಯ ದೆಹಲಿ ಹೊರತುಪಡಿಸಿ ಉಳಿದ ಕಡೆ ಸಿಬಿಎಸ್ಇ 10ನೇ ತರಗತಿ ಪ್ರಮುಖ ಪತ್ರಿಕೆಗಳ ಪರೀಕ್ಷೆ ಪೂರ್ಣಗೊಂಡಿದೆ. ಮುಖ್ಯವಲ್ಲದ ಒಂದೆರಡು ವಿಷಯಗಳ ಪರೀಕ್ಷೆ ಬಾಕಿ ಉಳಿದಿದ್ದು ಅವುಗಳಿಗಾಗಿ ಪರೀಕ್ಷೆ ನಡೆಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಕೂಡ ಸಿಬಿಎಸ್ಇ 10ನೇ ತರಗತಿ ಬಾಕಿ ವಿಷಯಗಳ ಪರೀಕ್ಷೆ ರದ್ದುಗೊಳಿಸಿದ ಬಗ್ಗೆ ಮಾಹಿತಿ ನೀಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...