alex Certify CBSE 10, 12 ನೇ ತರಗತಿ ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CBSE 10, 12 ನೇ ತರಗತಿ ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನವದೆಹಲಿ: ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅನೇಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಮತ್ತೆ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಹೀಗೆ ಮುಂದೂಡಲಾಗಿರುವ ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಲಾಕ್ಡೌನ್ ಮುಗಿದ ನಂತರ ನಡೆಸಲಾಗುವುದು. ಬಾಕಿ ಇರುವ 10, 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಸಿದ್ಧವಿರುವುದಾಗಿ ಸಿಬಿಎಸ್ಇ ತಿಳಿಸಿದೆ.

ಪದವಿಪೂರ್ವ ಕೋರ್ಸ್ ಗಳಿಗೆ ತೇರ್ಗಡೆ ಮತ್ತು ಪ್ರವೇಶಕ್ಕೆ ನಿರ್ಣಾಯಕವಾಗಿರುವ 10 ಮತ್ತು 12ನೇ ತರಗತಿಯ ಉಳಿದ 29 ವಿಷಯಗಳಿಗೆ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ ಆರಂಭವಾಗುವ ಕನಿಷ್ಠ 10 ದಿನಗಳ ಮೊದಲು ವೇಳಾಪಟ್ಟಿ ಪ್ರಕಟಿಸಲಾಗುವುದು. ಮಾನವ ಸಂಪನ್ಮೂಲ ಸಚಿವಾಲಯ ಈ ಕುರಿತಾಗಿ ಸಮಾಲೋಚನೆ ನಡೆಸಿದ್ದು ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ಲಾಕ್ ಡೌನ್ ತೆರವಾದ ಬಳಿಕ ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...