ನವದೆಹಲಿ: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲಾಗಿದೆ.
ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಕ್ವಿಂಟಲ್ ಗೆ 10 ರೂಪಾಯಿಂದ 285 ರೂಪಾಯಿವರೆಗೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಂದಿನ ಮಾರುಕಟ್ಟೆ ವರ್ಷದಲ್ಲಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಕೆಗೆ ಕ್ವಿಂಟಲ್ ಗೆ 10 ರೂಪಾಯಿಂದ 285 ರೂಪಾಯಿವರೆಗೆ ಹೆಚ್ಚಿಸಲು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಆಹಾರ ಸಚಿವಾಲಯದ ಪ್ರಸ್ತಾವನೆಯನ್ನು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಅಂಗೀಕರಿಸಿದೆ. ಇದು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸ್ಸಿಗೆ ಅನುಗುಣವಾಗಿ ಕೈಗೊಂಡ ತೀರ್ಮಾನವಾಗಿದೆ. ಪ್ರಮುಖ ಕೃಷಿ ಉತ್ಪನ್ನಗಳಿಗೆ ಬೆಲೆ ನೀತಿಯ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಶಾಸನಬದ್ಧ ಸಂಸ್ಥೆಯಾಗಿರುವ ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಹಣ ಪಾವತಿಸಲು ನೀಡಿದ ಸಲಹೆ ಪರಿಗಣಿಸಲಾಗಿದೆ.
ಪ್ರಮುಖವಾಗಿ ಕಬ್ಬು ಉತ್ಪಾದಿಸುವ ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣದಲ್ಲಿ ತಮ್ಮದೇ ಆದ ಕಬ್ಬಿನ ಬೆಲೆಯನ್ನು ರಾಜ್ಯ ಸಲಹಾ ಬೆಲೆಗಳು(ಎಸ್ಎಪಿ) ಎಂದು ನಿಗದಿಪಡಿಸಲಾಗುವುದು. ಇದು ಸಾಮಾನ್ಯವಾಗಿ ಕೇಂದ್ರ ಸರ್ಕಾರದ ಬೆಲೆಗಿಂತಲೂ ಹೆಚ್ಚಾಗಿರುತ್ತದೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಕಬ್ಬು ತೀವ್ರ ಕುಸಿತದಿಂದ ದೇಶದ ಒಟ್ಟು ಸಕ್ಕರೆ ಉತ್ಪಾದನೆ ಕುಂಠಿತವಾಗಲಿದೆ ಎಂದು ಹೇಳಲಾಗಿದೆ.