ದೇಶದಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ 45 ವರ್ಷ ಮೇಲ್ಪಟ್ಟ ಎಲ್ಲಾ ಕೇಂದ್ರ ಸರ್ಕಾರಿ ಉದ್ಯೋಗಿಗಳು ಲಸಿಕೆಯನ್ನ ಹಾಕಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
45 ವರ್ಷ ಮೇಲ್ಪಟ್ಟ ಕೇಂದ್ರ ಸರ್ಕಾರದ ಎಲ್ಲಾ ನೌಕರರು ಲಸಿಕೆಯನ್ನ ಪಡೆದುಕೊಳ್ಳಿ. ಈ ಮೂಲಕ ಕೊರೊನಾ ವೈರಸ್ ಹರಡುವಿಕೆಯನ್ನ ತಡೆಗಟ್ಟಬಹುದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ.
ಕೊರೊನಾ ಲಸಿಕೆಯನ್ನ ಪಡೆದ ಬಳಿಕ ಕೇಂದ್ರ ಸರ್ಕಾರಿ ನೌಕರರು ಎಲ್ಲಾ ಕೊರೊನಾ ಮಾರ್ಗಸೂಚಿಗಳನ್ನ ಪಾಲಿಸಬೇಕು ಎಂದು ಹೇಳಿದೆ.
ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಒಂದೇ ದಿನ 6150 ಜನರಿಗೆ ಸೋಂಕು. 39 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್
ವಿಶ್ವದಲ್ಲೇ ಕೊರೊನಾದಿಂದ ಅತಿ ಹೆಚ್ಚು ಸೋಂಕಿಗೆ ಒಳಗಾದ ರಾಷ್ಟ್ರದಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಮಾಸ್ಕ್ ಬಳಕೆ ಹಾಗೂ ಸಾಮಾಜಿಕ ಅಂತರವನ್ನ ಕಾಪಾಡಲೇಬೇಕಾದ ಅನಿವಾರ್ಯತೆ ಇದೆ.
ಮಹಾರಾಷ್ಟ್ರ, ದೇಶದಲ್ಲಿ ಅತಿ ಹೆಚ್ಚು ಕೊರೊನಾ ದಾಳಿಗೆ ಒಳಗಾದ ರಾಜ್ಯವಾಗಿದೆ. ಮಹಾರಾಷ್ಟ್ರದಲ್ಲಿ ನಿತ್ಯ ಸರಾಸರಿ 50 ಸಾವಿರ ಕೇಸ್ಗಳು ವರದಿಯಾಗ್ತಿದೆ. ಮಂಗಳವಾರ ಮಹಾರಾಷ್ಟ್ರದಲ್ಲಿ 47,288 ಕೇಸ್ಗಳು ವರದಿಯಾಗಿದೆ.