alex Certify ಕೋವಿಡ್ ಲಸಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಕೇಂದ್ರದಿಂದ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಲಸಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಕೇಂದ್ರದಿಂದ ಮಹತ್ವದ ಸೂಚನೆ

ದೇಶದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ 45 ವರ್ಷ ಮೇಲ್ಪಟ್ಟ ಎಲ್ಲಾ ಕೇಂದ್ರ ಸರ್ಕಾರಿ ಉದ್ಯೋಗಿಗಳು ಲಸಿಕೆಯನ್ನ ಹಾಕಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

45 ವರ್ಷ ಮೇಲ್ಪಟ್ಟ ಕೇಂದ್ರ ಸರ್ಕಾರದ ಎಲ್ಲಾ ನೌಕರರು ಲಸಿಕೆಯನ್ನ ಪಡೆದುಕೊಳ್ಳಿ. ಈ ಮೂಲಕ ಕೊರೊನಾ ವೈರಸ್​ ಹರಡುವಿಕೆಯನ್ನ ತಡೆಗಟ್ಟಬಹುದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ.

ಕೊರೊನಾ ಲಸಿಕೆಯನ್ನ ಪಡೆದ ಬಳಿಕ ಕೇಂದ್ರ ಸರ್ಕಾರಿ ನೌಕರರು ಎಲ್ಲಾ ಕೊರೊನಾ ಮಾರ್ಗಸೂಚಿಗಳನ್ನ ಪಾಲಿಸಬೇಕು ಎಂದು ಹೇಳಿದೆ.

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಒಂದೇ ದಿನ 6150 ಜನರಿಗೆ ಸೋಂಕು. 39 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ವಿಶ್ವದಲ್ಲೇ ಕೊರೊನಾದಿಂದ ಅತಿ ಹೆಚ್ಚು ಸೋಂಕಿಗೆ ಒಳಗಾದ ರಾಷ್ಟ್ರದಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಮಾಸ್ಕ್​ ಬಳಕೆ ಹಾಗೂ ಸಾಮಾಜಿಕ ಅಂತರವನ್ನ ಕಾಪಾಡಲೇಬೇಕಾದ ಅನಿವಾರ್ಯತೆ ಇದೆ.

ಮಹಾರಾಷ್ಟ್ರ, ದೇಶದಲ್ಲಿ ಅತಿ ಹೆಚ್ಚು ಕೊರೊನಾ ದಾಳಿಗೆ ಒಳಗಾದ ರಾಜ್ಯವಾಗಿದೆ. ಮಹಾರಾಷ್ಟ್ರದಲ್ಲಿ ನಿತ್ಯ ಸರಾಸರಿ 50 ಸಾವಿರ ಕೇಸ್​ಗಳು ವರದಿಯಾಗ್ತಿದೆ. ಮಂಗಳವಾರ ಮಹಾರಾಷ್ಟ್ರದಲ್ಲಿ 47,288 ಕೇಸ್​ಗಳು ವರದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...